ಬೆಳ್ತಂಗಡಿ: ಮಾ. 27ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಧಾರಿತ ತರಬೇತಿಯಡಿಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಸಮಾರೋಪದಲ್ಲಿ ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಇವರು ಮಾತನಾಡಿ ಪ್ರಸ್ತುತ ಕಾಲದಲ್ಲಿ ಕೌಶಲ್ಯಾಧಾರಿತ ಉದ್ಯೋಗದ ತರಬೇತಿಯನ್ನು ಪಡೆದುಕೊಳ್ಳುವ ಮುಖಾಂತರ ಸ್ವ-ಉದ್ಯೋಗ ಮಾಡುವಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಳ್ಳಬೇಕು.
ಇದರಿಂದ ತಾವು ಮಾಡುವ ಉದ್ಯೋಗದಲ್ಲಿ ಆತ್ಮಸ್ಥೆರ್ಯ ಹೆಚ್ಚಿಸುವುದರ ಜೊತೆಗೆ ಸ್ವಾವಲಂಬಿ ಜೀವನ ನಡೆಸಬಹುದು. ಇಂತಹ ಉದ್ಯೋಗವನ್ನು ಕಡಿಮೆ ಬಂಡವಾಳದೊಂದಿಗೆ ಹೆಚ್ಚಿನ ಆದಾಯವನ್ನು ಮನೆಯಲ್ಲೇ ಇದ್ದು ಮಾಡಬಹುದು ಎಂದು ತಿಳಿಸುತ್ತಾ ಭಾಗವಹಿಸಿದ 32 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಸೋಮನಾಥ್ ಕೆ., ತರಬೇತಿ ಶಿಕ್ಷಕಿ ಸೌಭಾಗ್ಯ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಶ್ವಿನಿ ನಿರೂಪಿಸಿ, ಧನ್ಯವಾದವಿತ್ತರು.