ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಲೈಫ್ ಬ್ಯಾಲೆನ್ಸ್ ಮತ್ತು ಸ್ಟ್ರೆಸ್ ಮ್ಯಾನೆಜ್‌ಮೆಂಟ್‌ ತರಬೇತಿ ಕಾರ್ಯಗಾರ

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪ್ರಾಂತ್ಯ ಡಿ, ವಲಯ15, ಜೆಸಿಐ ಭಾರತ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ, ಬ್ಯೂಟಿ ಪಾರ್ಲರ್ ಮಾಲಕಿಯರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಬೆಳ್ತಂಗಡಿ, ಯುವವಾಹಿನಿ ಬೆಳ್ತಂಗಡಿ ಘಟಕ ಇವರ ಸಹಭಾಗಿತ್ವದಲ್ಲಿ ಮಾ. 8ರ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಲೈಫ್ ಬ್ಯಾಲೆನ್ಸ್ ಮತ್ತು ಸ್ಟ್ರೆಸ್ ಮ್ಯಾನೆಜ್‌ಮೆಂಟ್‌ ವಿಷಯದಲ್ಲಿ ತರಬೇತಿ ಕಾರ್ಯಗಾರ ಮತ್ತು ಮಹಿಳಾ ಸಾಧಕಿಯರಿಗೆ ಗೌರವಾರ್ಪಣೆ ಕಾರ್ಯಕ್ರಮವು ಮಾ. 31ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1:30ರವರೆಗೆ ಜೇಸಿ ಭವನ ಬೆಳ್ತಂಗಡಿ ಇಲ್ಲಿ ನಡೆಸಲಾಗುವುದು.

ತರಬೇತುದಾರರಾಗಿ ಜೇಸಿ ಅಕ್ಷತಾ ಶೆಟ್ಟಿ ರಾಷ್ಟ್ರೀಯ ತರಬೇತುದಾರರು ಜೆಸಿಐ ಭಾರತ ಇವರು ನಡೆಸಿಕೊಡಲಿದ್ದಾರೆ. ಈ ತರಬೇತಿ ಕಾರ್ಯಕ್ರಮವನ್ನ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಪತ್ರಿಕಾ ಪ್ರಕಟನೆಗೆ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here