

ಬೆಳ್ತಂಗಡಿ: ಸ. ಪ್ರ. ದರ್ಜೆ ಕಾಲೇಜಿನಲ್ಲಿ ಮಾ. 28ರಂದು ಕಾಲೇಜಿನ ಕನ್ನಡ ವಿಭಾಗದಿಂದ ಜಾನಪದ ವೈಭವ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಸದರಿ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ವಿ. ಉದ್ಘಾಟಿಸುವುದರ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಅಧ್ಯಾಪಕ ಡಾ. ಶರತ್ ಕುಮಾರ್ ಟಿ. ಕೆ.ಭಾಗವಹಿಸಿ ಮಾತನಾಡಿದರು.

ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಮಾರುತಿ ಜಿ. ಇವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಪ್ರೊ. ಸುಧಾರಾಣಿ ಅವರು ಸ್ವಾಗತ ಕೋರಿದರು.
ಪ್ರೊ. ಪದ್ಮನಾಭ, ಪ್ರೊ. ರೊನಾಲ್ಡೊ ಪ್ರವೀಣ್ ಕೊರೆಯಾ ಅತಿಥಿಗಳಾಗಿ ಭಾಗವಹಿಸಿದ್ದರು. ಜಾನಪದ ವೈಭವ- 2025 ಕಾರ್ಯಕ್ರಮದಲ್ಲಿ ಜನಪದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, 10 ತಂಡಗಳಲ್ಲಿ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.
ಜಾನಪದ ಮೆರುಗನ್ನು ಮೆರೆಯುವ ಜನಪದ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ವಿದ್ಯಾರ್ಥಿನಿ ಸುಚಿತ್ರಾ ನಡೆಸಿಕೊಟ್ಟರು.