

ಮಾ. 29ರಂದು ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ಮಾಸಿಕ ಸಭೆಯು ನಿರ್ದೇಶಕಫಾ. ವಿನೋದ್ ಮಸ್ಕರೇನಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಸಂಸ್ಥೆಯ ಸಹ ನಿರ್ದೇಶಕ ಫಾ. ರೋಹನ್ ಲೋಬೋರವರು ಹಾಗೂ ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ, ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳ ಮೌಲ್ಯಮಾಪನವನ್ನು ಮಾಡುವುದರೊಂದಿಗೆ, 2024-2025 ರ ವಾರ್ಷಿಕ ದಿನಾಚರಣೆಯ ಬಗ್ಗೆ, ಪೋಷಕರ ಸಭೆ, ಶಾಲೆಯ ದೈನಂದಿನ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.
ಮಕ್ಕಳಿಗೆ ದೈನಂದಿನ ಪುನರ್ವಸತಿ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣವನ್ನೂ ನೀಡುವತ್ತಲೂ ಶಾಲೆಯು ಶ್ರಮಿಸುತ್ತಿದೆ. ಇದರೊಂದಿಗೆ ಮಕ್ಕಳಿಗೆ ಒದಗಿಸಬಹುದಾದಾ ವಿವಿಧ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಶಿಕ್ಷಕಿ ಸುರಕ್ಷಾ ಸ್ವಾಗತಿಸಿ, ಶಿಕ್ಷಕಿ ಧನ್ಯಾ ವಂದಿಸಿದರು.