ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಏ. 20ರಂದು ಉದ್ಘಾಟನೆಗೊಳ್ಳಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ಆಮಂತ್ರಣ ಪತ್ರಿಕೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ ಸವನಾಲು, ನಿರ್ದೇಶಕರುಗಳಾದ ಪ್ರಸನ್ನ ಗೌಡ ಬಾರ್ಯ, ಮಾದೇವ ಗೌಡ ಬೆಳ್ತಂಗಡಿ ಮುಂತಾದವರು ನೀಡಿ ಆಶೀರ್ವಾದ ಪಡೆದರು.
ವಾಣಿ ಶಿಕ್ಷಣ ಸಂಸ್ಥೆಯಿಂದ ಶೃಂಗೇರಿ ಮಠಕ್ಕೆ ಭೇಟಿ: ಶೃಂಗೇರಿ ಸ್ವಾಮಿಗಳಿಗೆ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು
