Site icon Suddi Belthangady

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರುನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮ, ಮುಸ್ಲಿಂರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ, ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರಗಳನ್ನು ಧರಿಸಿದ ಪುರುಷರು ಮತ್ತು ಮಕ್ಕಳು ಬೆಳಗ್ಗೆಯೇ ಮಸ್ಜಿದ್ ಗಳಿಗೆ ತೆರಳಿ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು. ಈದುಲ್ ಫಿತ್ರ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

ಮಹಿಳೆಯರೂ ಕೂಡ ಹೊಸ ವಸ್ತ್ರಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ: ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು. ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ತಾಲೂಕು ಇನ್ ಸ್ಪೆಕ್ಟರ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Exit mobile version