Site icon Suddi Belthangady

ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ತರಬೇತಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಶಿಕ್ಷಕಿ ಪ್ರಮೀಳಾ ತರಬೇತಿಯನ್ನು ನೀಡಿದರು. ವೇದಿಕೆಯಲ್ಲಿ ಕಮಲ್ ತೇಜು ರಜಪೂತ್ ಉಪಸ್ಥಿತರಿದ್ದರು. ಈ ತರಬೇತಿ ಕಾರ್ಯಕ್ರಮಕ್ಕೆ ಜೋಸೆಫ್ ಸ್ವಾಗತಿಸಿದರು. ಪೂರ್ಣಿಮಾ ಕೆ.ಎಂ ವಂದಿಸಿದರು.

Exit mobile version