

ಬೆಳ್ತಂಗಡಿ: ಪುತ್ತೂರಿನಲ್ಲಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಸಮಿತಿಯ ಕೋಶಾಧಿಕಾರಿ ಹೆಚ್. ಪದ್ಮ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯ ನ್ಯಾಯವಾದಿ ಗೋಪಾಲಕೃಷ್ಣ ಗುಲ್ಲೋಡಿ, ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ, ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ, ಜೊತೆ ಕಾರ್ಯದರ್ಶಿ ರಾಮಣ್ಣ ಗೌಡ, ಪುತ್ತೂರಿನ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರಾಮದೇವ್, ವಿಠಲ್ ಗೌಡ, ಸಂಘದ ಮಾಜಿ ಅಧ್ಯಕ್ಷ ಲಿಂಗಪ್ಪಗೌಡ, ಜಿಲ್ಲಾ ಸಮಿತಿಯ ಸದಸ್ಯ ಗಣೇಶ್ ಕಲಾಯಿ ಮತ್ತು ಜಿಲ್ಲಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.