

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಹಾಗೂ ವಾಚನಾಲಯದ ಉದ್ಘಾಟನಾ ಕಾರ್ಯಕ್ರಮ ಮಾ. 29ರಂದು ನೆರವೇರಿತು.
ಶಾಲಾ ಸಂಚಾಲಕ ಗುರು ಎಲಿಯಸ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಯಾಗಿ ಡಾ . ಎಂ ಎನ್ ತುಳಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಹಾಗೂ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಶ್ಯಾಮ್ ಸುಂದರ್ ಭಟ್ ಇವರು ಉಪಸ್ಥಿತರಿದ್ದು, ರಿಬ್ಬನ್ ಕತ್ತರಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.
ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜ, ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ನೀತಾರವರು ನಿರೂಪಿಸಿ, ಸಹ ಶಿಕ್ಷಕಿ ವೀಣಾ ಸ್ವಾಗತಿಸಿ, ಸಹ ಶಿಕ್ಷಕಿ ರಾಜೇಶ್ವರಿ ವಂದಿಸಿದರು.