Site icon Suddi Belthangady

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ, ಸಮ್ಮರ್ ಪ್ಯಾರಡೈಸ್ ನ್ನು ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತದನಂತರ ಮಾತನಾಡಿದ ಅವರು ಬೇಸಿಗೆ ಶಿಬಿರದ ಮಹತ್ವ ಹಾಗೂ ಅದರ ಉದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ವೃತ್ತಿ ಮತ್ತು ಪ್ರವೃತ್ತಿಯ ವ್ಯತ್ಯಾಸ ಹಾಗೂ ಅದರ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಮನೋರಮ ಆಗಮಿಸಿದ್ದರು. ಅವರು ಮಾತನಾಡುತ್ತಾ ಬೇಸಿಗೆ ಶಿಬಿರ ಮಕ್ಕಳಿಗೆ ಹೇಗೆ ಸಂಸ್ಕೃತಿ ಸಂಸ್ಕಾರಗಳನ್ನು ತಿಳಿಸಿಕೊಡುತ್ತದೆ. ಹಾಗೂ ಇಲ್ಲಿ ಕಲಿತಂತಹ ವಿಚಾರಗಳನ್ನು ಹೇಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು.

ಈ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ ಸ್ವಾಗತಿಸಿದರು. ವಿದ್ಯಾರ್ಥಿನಿ ಪೂರ್ವಿಭಟ್ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತನ್ವಿ ನಡೆಸಿಕೊಟ್ಟು ವಂದನಾರ್ಪಣೆಯನ್ನು ನಿವೇದ್ಯ ನೆರವೇರಿಸಿದರು.

Exit mobile version