ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ, ಕ್ರೀಡಾ ಶಿಬಿರ ಉದ್ಘಾಟನೆ

0

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ 10 ದಿನದ ಕ್ರೀಡಾ ಶಿಬಿರದ ಉದ್ಘಾಟನೆ ಎ. 1ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಧ್ಯಾನ ಹಾಗೂ ಯೋಗದ ಮಹತ್ವವನ್ನು ತಿಳಿಸಿ, ಒತ್ತಡ ನಿಯಂತ್ರಣದ ಬಗ್ಗೆ ತರಬೇತಿ ನೀಡಿದರು.

ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಯೋಗ, ಕ್ರೀಡೆ ಹಾಗೂ ಕರಕುಶಲ ವಸ್ತುಗಳ ತಯಾರಿಕೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಕ್ರೀಡಾ ತರಬೇತಿ ನೀಡಲಿದ್ದಾರೆ. ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಸಹಕರಿಸಿದರು.

LEAVE A REPLY

Please enter your comment!
Please enter your name here