

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರದ ಪ್ರತಿಷ್ಠಾ ಜಾತ್ರೋತ್ಸವದ ಅಂಗವಾಗಿ ಎ. 1ರಂದು ಕ್ಷೇತ್ರದ ಪೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರ ನೇತೃತ್ವದಲ್ಲಿ ಬೆಳಿಗ್ಗೆ ನವಗ್ರಹ ಶಾಂತಿ ಹೋಮ, ನವಗ್ರಹ ಗಳಿಗೆ ವಿಶೇಷ ಪೂಜೆ ವೈದಿಕ ವಿಧ ವಿಧಾನಗಳೊಂದಿಗೆ ನಡೆಯಿತು.
ರಾತ್ರಿ ಶ್ರೀ ರಾಮ ದೇವರ ರಜತ ಪಾಲಕಿ ಉತ್ಸವ ಜರಗಿತು. ಎ. 2ರಂದು ಮಹಾ ಮೃತ್ಯುಂಜಯ ಹೋಮ, ಅನ್ನಪೂರ್ಣೀಶ್ವರಿ ದೇವಿಗೆ ಮಹಾಪೂಜೆ, ನಾಗ ದೇವರಿಗೆ ಪಂಚಾಮೃತ ಅಭಿಷೇಕ, ರಾತ್ರಿ ಶ್ರೀ ಅನ್ನ ಪೂರ್ಣೇಶ್ವರಿ ದೇವಿಯ ಬಲಿ ಉತ್ಸವ, ಪುಷ್ಪ ರಥೋತ್ಸವ ನಡೆಯಲಿದೆ.