Site icon Suddi Belthangady

ವೇಣೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ

ವೇಣೂರು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ. 1ರಂದು ವೇಣೂರು ಗ್ರಾಮ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವೇಣೂರು ನಮನ ಪೆಟ್ರೋಲ್ ಪಂಪ್ ಬಳಿಯಿಂದ ವೇಣೂರು ಮುಖ್ಯ ಪೇಟೆವರೆಗಿನ ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸದ್ರಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ, ಉಪಾಧ್ಯಕ್ಷ ಉಮೇಶ್ ಎನ್. ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ, ಲೆಕ್ಕ ಸಹಾಯಕರು, ವೇಣೂರು ಎಸ್.ಡಿ.ಎಮ್ ಐಟಿಐ ಉಪನ್ಯಾಸಕರು, ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಸದಸ್ಯರು, ತ್ಯಾಜ್ಯ ನಿರ್ವಹಣಾ ಘಟಕದ ಸಿಬ್ಬಂದಿಗಳು, ವಿವಿಧ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಭಾಗವಹಿಸಿ ಸ್ವಚ್ಛತ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು.

Exit mobile version