ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ

0

ಪುದುವೆಟ್ಟು: ಏ.1ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಒಂದು ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಅರಸಿನಮಕ್ಕಿ ಕಾಲೇಜಿನ ಉಪನ್ಯಾಸಕಿ ಸೌಮ್ಯಶ್ರೀ ಅವರು ತಮ್ಮ ದಿವ್ಯ ಹಸ್ತದಿಂದ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಬೇಸಿಗೆ ಶಿಬಿರವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಈ ದಿನದ ಸಂಪನ್ಮೂಲ ವ್ಯಕ್ತಿಯಾದ ಅಭಿನಯಗೀತೆಯಲ್ಲಿ ರಾಜ್ಯ ಪ್ರಶಸ್ತಿ ಪಡೆದಂತಹ ಶ್ರೀಮತಿ ರಂಜಿನಿ ಮುಂಡಾಜೆ ಅವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ವಹಿಸಿಕೊಂಡಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತಹ ಶ್ರೀಮತಿ ಸೌಮ್ಯ ಶ್ರೀ ಯವರು ಇಂತಹ ಬೇಸಿಗೆ ಶಿಬಿರಗಳನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಬೇಸಿಗೆ ಶಿಬಿರದಿಂದ ಆಗುವ ಉಪಯೋಗಗಳನ್ನು ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಂಡೋಗಬೇಕು, ವಿದ್ಯಾರ್ಥಿಗಳು ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಸೀನಪ್ಪಗೌಡರವರು ಉತ್ತಮ ನುರಿತ ಸಂಪನ್ಮೂಲ ವ್ಯಕ್ತಿಗಳು ಬೇಸಿಗೆ ಶಿಬಿರದಲ್ಲಿ ನಿಮಗೆ ತಿಳಿಸಿಕೊಟ್ಟಂತಹ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸಭಾ ಕಾರ್ಯಕ್ರಮದ ನಂತರ ರಂಜಿನಿ ಅವರು ವಿದ್ಯಾರ್ಥಿಗಳಿಗೆ ಅಭಿನಯ ಗೀತೆ, ನಾಟಕ ಅಭಿನಯ, ಏಕಪಾತ್ರ ಅಭಿನಯ, ಜಾನಪದ ಗೀತೆಗಳನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಈ ಬೇಸಿಗೆ ಶಿಬಿರದ ಮೊದಲ ದಿನದ ಪ್ರಯೋಜನವನ್ನು ಪಡೆದುಕೊಂಡರು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿ ಶೀಲಾ ಎನ್. ರವರು ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಾಲೆ ಶಿಕ್ಷಕಿ ಪುಷ್ಪಲತಾ ನಿರೂಪಿಸಿದರು. ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು. ವೇದಾವತಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here