

ಬೆಳ್ತಂಗಡಿ: ತಾಲೂಕಿನ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಏ.3ರಂದು ನಡೆದಿದೆ.
ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಕಸಬಾ ಪುಂಡಿಕ್ಕು ಎಂಬಲ್ಲಿ ಚನನ ಗೌಡ ( 69 ವರ್ಷ) ಏ.3ರಂದು ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ 11ಕೆ.ವಿ. ಕುವೆಟ್ಟು ಫೀಡರ್ ನ ಹೆಚ್.ಟಿ ಲೈನ್ ಗೆ ಬಿದ್ದು ಈ ಘಟನೆ ನಡೆದಿದೆ.
ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಿದ್ದಾಗ, ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಮಾರ್ಗ ಮದ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿರುತದೆ.
ಈ ಬಗ್ಗೆ ಬೆಳ್ತಂಗಡಿ ಶಾಖಾಧಿಕಾರಿಯವರು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.