ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ

0

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ರವರ ನೇತೃತ್ವದಲ್ಲಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀರಾಮ ತಾರಕ ಮಂತ್ರ ಭಜನಾ ಸಪ್ತಾಹ ಹಾಗೂ ವರ್ಷಾವಧಿ ಜಾತ್ರೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಹಾಗೂ ಸೂಳಬೆಟ್ಟು ಶ್ರೀ ಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಶ್ರೀ ರಾಮ ಜಯರಾಮ ಜಯ ಜಯ ರಾಮ ತಾರಕಮಂತ್ರ ಭಜನಾ ಕಾರ್ಯಕ್ರಮವು ಏ. 1ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಭಜನೆಯ ನೇತೃತ್ವವನ್ನು ವಹಿಸಿದ್ದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಪ್ರಧಾನ ಸಂಚಾಲಕ ಹರೀಶ್ ವೈ. ಚಂದ್ರಮ, ಸದಾನಂದ ಸಾಲಿಯಾನ್ ಬಳಂಜ ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿಯ ಸಂಚಾಲಕ ಪ್ರಮೋದ್ ಪೂಜಾರಿ ಸೂಳ ಬೆಟ್ಟು, ಬಳಂಜ ಬಿಲ್ಲವ ಸಂಘದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಉಪಸ್ಥಿತರಿದ್ದರು.

ಭಜನಾ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮಹಾ ಮಂಡಲೇಶ್ವರ ಬ್ರಹ್ಮಾನಂದ ಸ್ವಾಮೀಜಿಯವರು ಭೇಟಿ ನೀಡಿ ಮಂಡಳಿಯ ಕುಣಿತ ಭಜನೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತದನಂತರ ಮಂಡಳಿಯ ಸದಸ್ಯರು ಪೂಜ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಸ್ವಾಮೀಜಿಯವರನ್ನು ಪವಿತ್ರ ಜುನಾ ಅಖಾಡದ ಮಹಾ ಮಂಡಲೇಶ್ವರರಾಗಿ ಆಯ್ಕೆ ಅದ ಗೌರವಕ್ಕಾಗಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ವತಿಯಿಂದ ಸಂಚಾಲಕ ಹರೀಶ್ ವೈ. ಚಂದ್ರಮರನ್ನು ಸನ್ಮಾನಿಸಿದರು.

ಮಂಡಳಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಸ್ವಾಮೀಜಿಯವರು ಒತ್ತಡ ಮುಕ್ತ ಜೀವನಕ್ಕಾಗಿ ಎಳೆಯ ಪ್ರಾಯದಿಂದಲೇ ಮಕ್ಕಳು ದ್ಯಾನ,ಯೋಗ, ಪ್ರಾಣಾಯಾಮ, ದೇವರ ಇರುವಿಕೆಯ ಕುರಿತು ಅಚಲವಾದ ನಂಬಿಕೆ ಮತ್ತು ಗುರು ಹಿರಿಯರ ಮೇಲೆ ಅಪಾರವಾದ ಗೌರವ ಇಟ್ಟುಕೊಂಡು ಜೀವನ ನಡೆಸಬೇಕು ಎಂದು ಮಾರ್ಗದರ್ಶನ ಮಾಡಿದರು.

LEAVE A REPLY

Please enter your comment!
Please enter your name here