Site icon Suddi Belthangady

ಬಂದಾರು: ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ಬಂದಾರು: ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಎ. 3ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮವು ಚೆಂಡೆವಾದನ, ಸಿಡಿಮದ್ದುಗಳ ಸದ್ದಿನೊಂದಿಗೆ ವಿವಿಧ ವೈದಿಕ ಕಾರ್ಯಕ್ರಮ ನೆರವೇರಿತು.

ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ವೆಂಕಟ್ರಮಣ ಗೌಡ ಬಾಳೆಹಿತ್ತಿಳು, ದಮಯಂತಿ ಪಾಂಜಾಳ, ಲಕ್ಷಣ ನಾಯ್ಕ ಮುoಡೂರು, ನಿರಂಜನ ಗೌಡ ನಡುಮಜಲು, ಶರತ್ ಮುರ್ತಾಜೆ, ಯಕ್ಷಗಾನ ಸಮಿತಿ ಅಧ್ಯಕ್ಷ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ. ಎ. ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ನಿರ್ದೇಶಕ ಪ್ರಸಾದ್ ಗೌಡ ಅಂಡಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಅಧ್ಯಕ್ಷ ಸುಂದರ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೃಷ್ಣಯ್ಯ ಆಚಾರ್ಯ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ, ಅರ್ಚಕ ಭೀಮ್ ಭಟ್ ಹಾಗೂ ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Exit mobile version