




ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ 3 ದಿನಗಳಿಂದ ಬೇಸಿಗೆ ಶಿಬಿರ ನಡೆಯುತ್ತಿದ್ದು ಏ. 4ರಂದು ಆ ಶಿಬಿರಕ್ಕೆ ತೆರೆ ಎಳೆಯಲಾಯಿತು. ಈ ಶಿಬಿರದಲ್ಲಿ ಮಕ್ಕಳೇ ತಯಾರಿಸಿರುವ ವಿವಿಧ ವಸ್ತುಗಳ ಪ್ರದರ್ಶನ ಹಾಗೂ ಮಾರಾಟವನ್ನು ಏರ್ಪಡಿಸಲಾಗಿತ್ತು.
ಈ ವ್ಯಾಪಾರ ಮಳಿಗೆಯ ಉದ್ಘಾಟನಾ ಸಮಾರಂಭವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ(ಕೇಂದ್ರ ಪಠ್ಯಕ್ರಮ) ಇದರ ಪ್ರಾಂಶುಪಾಲ ಮನಮೋಹನ್ ನಾಯಕ್ ಇವರು ಹಾಗೂ ಮುರಳಿಧರ್ ದಾಸ್ ಇವರು ಆಗಮಿಸಿ ದೀಪ ಪ್ರಜ್ವಲಿಸಿ ಜೊತೆಗೆ ಪ್ರತಿ ಮಳಿಗೆಯ ದರ ಪಟ್ಟಿಯನ್ನು ಬಿಡುಗಡೆಗೊಳಿಸಿ ವ್ಯಾಪಾರ ಮಳಿಗೆಗೆ ಚಾಲನೆ ನೀಡಿದರು



ತದನಂತರ ಮಾತಾಡಿದ ಅವರು ಬೇಸಿಗೆ ಶಿಬಿರದಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನ ಹಾಗೂ ಅವರ ವ್ಯಕ್ತಿತ್ವ ವಿಕಸನದ ಮೇಲೆ ಅದು ಬೀರುವ ಪರಿಣಾಮವನ್ನು ವ್ಯಾಪಾರದ ಅನುಭವವನ್ನು ವಿದ್ಯಾರ್ಥಿಗಳಿಗೆ ತಿಳಿಯಲು ಉತ್ತಮ ಅವಕಾಶ ಎಂದು ಶ್ಲಾಘಿಸಿದರು.

ವಿದ್ಯಾರ್ಥಿಗಳ ಆಸಕ್ತಿ ಭರಿತ ವ್ಯಾಪಾರಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಸಿದ್ದ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ಕೇಂದ್ರ ಪಠ್ಯಕ್ರಮ) ಇದರ ಚಿತ್ರಕಲಾ ಶಿಕ್ಷಕ ರವಿಚಂದ್ರ, ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಪ್ರತ್ಯಕ್ಷದರ್ಶಿಗಳಾಗಿದ್ದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ. ವಿ. ಇವರು ಸ್ವಾಗತಿಸಿ, ಧನ್ಯವಾದವಿತ್ತರು.









