

ಬೆಳ್ತಂಗಡಿ: ಭ್ರಷ್ಟ ಕಾಂಗ್ರೆಸ್ ಸರ್ಕಾರವು ಬೆಲೆ ಏರಿಕೆ ಮತ್ತು ದುರಾಡಳಿತ ನಡೆಸುತ್ತಿರುವುದರ ವಿರುದ್ಧ ಜನಾಕ್ರೋಶ ಯಾತ್ರೆ ಏ. 9ರಂದು ಮಂಗಳೂರಿನ ಅಂಬೇಡ್ಕರ್ ಸರ್ಕಲ್ ಬಳಿ ನಡೆಯಲಿದೆ. ಅದರ ಪೂರ್ವಭಾವಿ ಸಭೆ ಏ. 4ರಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಏ. 6ರಂದು ಬಿಜೆಪಿ ಸಂಸ್ಥಾಪನ ದಿನ ಇದರ ಬಗ್ಗೆ ಪ್ರತಿ ಭೂತಿನಲ್ಲಿ ಸಂಸ್ಥಾಪನ ದಿನ ಆಗುವ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಮಂಡಲದ ಪ್ರಮುಖರಿಗೆ ಮಾಹಿತಿಯನ್ನು ನೀಡಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕೋಶಾಧಿಕಾರಿ ಸಂಜಯ್ ಪ್ರಭು, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಮಾಧ್ಯಮ ಪ್ರಮುಖ್ ವಸಂತ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ.ಎಸ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.