Site icon Suddi Belthangady

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ಬರೋಡ ಭೇಟಿ

ಬಂದಾರು: ಎ. 5ರಂದು ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯ ನಿರಂಜನ ಗೌಡ ನಡುಮಜಲು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ. ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ನಿರ್ದೇಶಕ ಪ್ರಸಾದ್ ಗೌಡ ಅಂಡಿಲ, ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಯಕ್ಷಗಾನ ಸಮಿತಿ ಅಧ್ಯಕ್ಷ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಪಂಚಾಯತ್ ಸದಸ್ಯ ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ, ಅರ್ಚಕ ಭೀಮ್ ಭಟ್, ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Exit mobile version