

ಬೆಳ್ತಂಗಡಿ: ಲಾಯಿಲ ಕರ್ನೋಡಿ ಸರಕಾರಿ ಉನ್ನತೀರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ಕ್ಯಾನ್ ಫಿನ್ ಹೊಮ್ಸ್ ಸಂಸ್ಥೆ ಬೆಂಗಳೂರು, ರೋಟರಿ ಕ್ಲಬ್ ಇಂದಿರಾ ನಗರ ಬೆಂಗಳೂರು, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ಪತ್ರಕರ್ತರ ಸಂಘದ ಸಹಕಾರದೊಂದಿಗೆ ಕರ್ನೋಡಿ ಶಾಲೆಯಲ್ಲಿ ಸ್ನೇಹ ಸಮ್ಮಿಲನ ಮತ್ತು ನವೀಕರಣಗೊಂಡ ಶಾಲೆಯ ಹಸ್ತಾಂತರ ಕಾರ್ಯಕ್ರಮ ಎ.6ರಂದು ನಡೆಯಿತು.
ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ ಸಭಾ ಕಾರ್ಯಕ್ರಮ ಉದ್ಘಾಟನೆ ಮಾಡಿದರು, ಉದ್ಯಮಿ ಶಶಿಧರ ಶೆಟ್ಟಿ ಹಳೆ ವಿದ್ಯಾರ್ಥಿ ಸಂಘದ ಕಚೇರಿ ಉದ್ಘಾಟನೆ ಮಾಡಿದರು.
ಹಿಲ್ಡಾ ಸಿಕ್ವೇರಾ ಇವರ ಸ್ಮರಣಾರ್ಥವಾಗಿ ಇವರ ಮಗ ವಿನಯ್ ಸಿಕ್ವೇರಾರವರು ನೀಡಿದ ಧ್ವಜ ಸ್ತಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನೋಡಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಧನಂಜಯ್ ರಾವ್, ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ., ಲಾಯಿಲ ಪಂಚಾಯತ್ ಸದಸ್ಯರಾದ ಗಣೇಶ್ ಆರ್., ಅರವಿಂದ್ ಕುಮಾರ್, ಗಿರೀಶ್ ಡೋಂಗ್ರೆ, ಬೆಳ್ತಂಗಡಿ ಜೆಸಿಐ ಅಧ್ಯಕ್ಷೆ ಆಶಾಲತಾ ಪ್ರಶಾಂತ್, ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಸೌಮ್ಯ, ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜ, ಶಾಲೆಯ ಮುಖ್ಯೋಪಾಧ್ಯಾಯ ಜಗನ್ನಾಥ್, ಗುರು ರಾಘವೇಂದ್ರ ಪ್ರತಿಷ್ಟಾನದ ಕಾರ್ಯದರ್ಶಿ ವಸಂತ ಸುವರ್ಣ, ಜಯಂತ್, ಸದಾಶಿವ ಉಪಸ್ಥಿತರಿದ್ದರು.
ಮಧ್ಯಾಹ್ನ ನಂತರ ಅಂಗನವಾಡಿ ಮಕ್ಕಳು ಮತ್ತು ಕರ್ನೋಡಿ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ, ಸಂಜೆ ಕರ್ನೋಡಿ ಹಳೆ ವಿದ್ಯಾರ್ಥಿ ಸಂಘದಿಂದ ವೈವಿಧ್ಯಮಯ ಕಾರ್ಯಕ್ರಮ, ರಾತ್ರಿ 7ರಿಂದ ಶಾಲೆಯ ಸಭಾಭವನ ಲೋಕಾರ್ಪಣೆ ನಡೆಯಲಿದೆ.
ರಾತ್ರಿ 8ರಿಂದ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ಅಮ್ಮೆರ್ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ.