ಬೆಳ್ತಂಗಡಿ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ
ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ ಎಲ್ಲಾ ಕಾರ್ಯಕ್ರಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ದ. ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಶಿಫಾರಸ್ಸಿನಂತೆ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿಂದು ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ
