

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ದ ಪ್ರತಿಷ್ಠಾ ಜಾತ್ರೋತ್ಸವದ ಅಂಗವಾಗಿ ಕ್ಷೇತ್ರದ ಪ್ರೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರ ನೇತೃತ್ವದಲ್ಲಿ ಎ. 6 ರಾಮ ನವಮಿ ಬೆಳಿಗ್ಗೆ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮಂಗಳ, ಮದ್ಯಾಹ್ನ ಶ್ರೀ ಪಾಲಕಿ ಬಲಿ ಉತ್ಸವ, ರಾತ್ರಿ ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ, ಮಹಾ ಬ್ರಹ್ಮ ರಥೋತ್ಸವ ದೊಂದಿಗೆ ಜಾತ್ರೋತ್ಸವ ಸಂಪನ್ನ ಗೊಂಡಿತು.
ಬ್ರಹ್ಮ ರಥೋತ್ಸವದ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಒಳನಾಡು ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ, ಸಂಸದ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಶ್ರೀ ರಾಮ ಕ್ಷೇತ್ರ ಭಟ್ಕಳ,ಉ. ಕ. ದ. ಕ., ಜಿಲ್ಲಾ ಸೇವಾ ಸಮಿತಿ, ತಾ. ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.