

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಏ. 7ರಂದು ಪೂರ್ವಾಹ್ನ ಗಂಟೆ 10.30ಕ್ಕೆ ನಾವೂರು ಗ್ರಾಮ ಪಂಚಾಯತ್ ವ್ಯಾಪ್ಯಿಯಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತ್ತು ಪ್ರೌಢ ಶಾಲೆಯ ಮಕ್ಕಳು, ವಿವಿಧ ಸಂಘ ಸಂಸ್ಧೆಗಳ ಪದಾಧಿಕಾರಿಗಳು, ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ, ಸಂಜೀವಿನಿ ಒಕ್ಕೂಟದ ಎಂ. ಬಿ. ಕೆ., ಎಲ್.ಸಿ.ಆರ್ .ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು,ಜಲ ಸಖಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಧರು ಭಾಗವಹಿಸಿದರು.
ಎಲ್ಲಾ ಸ್ವಚ್ಚತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.