Site icon Suddi Belthangady

ಏ. 8: ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಬೆಳ್ತಂಗಡಿ: ಮಾ. 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿ.ಯು ಪರೀಕ್ಷೆಯ ಫಲಿತಾಂಶವು ಎ.8ರಂದು ಪ್ರಕಟವಾಗಲಿದೆ.

ಮಧ್ಯಾಹ್ನ 1.30ರಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಈ ಬಾರಿಯ ದ್ವಿತೀಯ ಪಿ.ಯು.ಸಿ ಅಂತಿಮ ಪರೀಕ್ಷೆಯನ್ನು ಮಾ.1ರಿಂದ 20ರವರೆಗೆ ನಡೆಸಲಾಗಿತ್ತು. ಸದ್ಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಏ. 8ರಂದು ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಮಧ್ಯಾಹ್ನ 1.30 ರಿಂದ Karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ತಿಳಿಸಿದೆ.

Exit mobile version