

ಗೇರುಕಟ್ಟೆ: 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆಗೆ ಶೇ.83.33 ಫಲಿತಾಂಶ ಲಭಿಸಿದೆ.ವಿಜ್ಞಾನ ವಿಭಾಗದಲ್ಲಿ ಒಟ್ಟು 7 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 71 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.90 ಫಲಿತಾಂಶ ಲಭಿಸಿದೆ. ಕಲಾ ವಿಭಾಗದಲ್ಲಿ ಒಟ್ಟು 15 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.80 ಫಲಿತಾಂಶ ಲಭಿಸಿದೆ.
ವಿಜ್ಞಾನ ವಿಭಾಗದಲ್ಲಿ ಫಾತಿಮಾತ್ ಶಜಾ 518, ವಾಣಿಜ್ಯ ವಿಭಾಗದಲ್ಲಿ ವರ್ಷಿತಾ 541, ಚಿತ್ರಾವತಿ 527, ಮಹಮ್ಮದ್ ಇರ್ಫಾದ್ 520, ಕಲಾ ವಿಭಾಗದಲ್ಲಿ ಮುಝೈನ 499, ಸ್ವಾತಿ 494 ಅತ್ಯುತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ನಾಲ್ಕು ವಿಧ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 17 ವಿಧ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿಧ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 2 ವಿಧ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟು 42 ವಿದ್ಯಾರ್ಥಿಗಳಲ್ಲಿ ಒಟ್ಟು 35 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.83.35 ಫಲಿತಾಂಶ ಲಭಿಸಿದೆ.