ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

0

ಅರಸಿನಮಕ್ಕಿ : 2024-2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 26 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 84.6 ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ 14 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 2 ವಿದ್ಯಾರ್ಥಿಗಳು ಅತ್ಯುತ್ತಮ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ. ಸುಮ 551, ಪ್ರತೀಕ್ಷಾ516 ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 12 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಸುಚಿತ್ರ 506, ಶ್ರಾವ್ಯ 501 ಅಂಕವನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here