

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಎ. 5ರಂದು ನೆರವೇರಿತು.ಶಾಲಾ ಸಂಚಾಲಕ ಫಾ. ಎಲಿಯಾಸ್ ಡಿಸೋಜ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಅಜೇಯ್ ಡಿಸೋಜ, ಚೆಸ್ ಮಾಸ್ಟರ್ ಪವನ್ ಹಾಗೂ ಸುಪ್ರೀತ್, ಚಿತ್ರಕಲಾ ಪರಿಣಿತರು, ಸುಮನ ಹಾಗೂ ಕರಕುಶಲ ತರಬೇತುದಾರರಾದ ಸಂಜೀವ ಹಾಗೂ ಪೂರ್ಣಿಮಾ ಉಪಸ್ಥಿತರಿದ್ದರು.ಈ ಶಿಬಿರವು ಏ. 12 ರವರೆಗೆ ನಡೆಯಲಿದ್ದು ವಿವಿಧ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಿದ್ದು,ವಿವಿಧ ಮನೋರಂಜನಾ ಚಟುವಟಿಕೆಗಳು ನಡೆಯಲಿದೆ.
ಸಹ ಶಿಕ್ಷಕಿ ಶ್ರೀಮತಿ ಪ್ರೇಮ ನಿರೂಪಿಸಿದ ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಶ್ರೀಮತಿ ನಿರ್ಮಲಾ ಸ್ವಾಗತಿಸಿ ಸಹ ಶಿಕ್ಷಕಿ ಶ್ರೀಮತಿ ರೆನಿಟಾ ವಂದಿಸಿದರು.