Site icon Suddi Belthangady

ಕಾಶಿಪಟ್ಣ ಸರಕಾರಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ಕಾಶಿಪಟ್ಣ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024- 25ನೇ ಶೈಕ್ಷಣಿಕ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏ. 8ರಂದು ನಡೆಯಿತು.

ಎಸ್. ಡಿ. ಎಂ. ಸಿ ಅಧ್ಯಕ್ಷ ವಿದ್ಯಾನಂದ ಇವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರು ಹಳೇ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರ ಸತೀಶ್ ಕೆ. ಶಾಲಾ ಶೈಕ್ಷಣಿಕ ವಿಚಾರಗಳ ಬಗ್ಗೆ ಮಾತನಾಡಿದರು.

ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಎಸ್. ಡಿ. ಎಂ. ಸಿ ಸದಸ್ಯ ಹರೀಶ್ ಕೆ. ಇವರು ಶೈಕ್ಷಣಿಕ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾರ್ಗದರ್ಶಿ ಶಿಕ್ಷಕರಾಗಿ ಆಗಮಿಸಿದಂತಹ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಇಲ್ಲಿನ ಶಿಕ್ಷಕ ದೇವದಾಸ್ ಇವರು ಶೈಕ್ಷಣಿಕ ವಿಚಾರಗಳು, ರಜಾ ದಿನಗಳಲ್ಲಿ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಗಳು ಹಾಗೂ ಪೋಷಕರ ಜವಾಬ್ದಾರಿಗಳ ಬಗ್ಗೆ ಮನವರಿಕೆ ಮಾಡಿದರು.

ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಅಖ್ತರ್ ಅಹಮದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಕ್ರೀಡಾ ಸ್ಪರ್ಧೆಗಳ ಬಹುಮಾನಗಳನ್ನು ವೇದಿಕೆಯಲ್ಲಿ ವಿತರಿಸಲಾಯಿತು. ಎಸ್. ಡಿ. ಎಂ. ಸಿ ಸಮಿತಿ ಉಪಾಧ್ಯಕ್ಷೆ ಶಶಿಕಲಾ, ಮಾತೆಯರ ಸಂಘದ ಅಧ್ಯಕ್ಷೆ ಸರಸ್ವತಿ, ಅಂಗನವಾಡಿ ಶಿಕ್ಷಕಿ ಸುಮಿತ್ರ ವೇದಿಕೆಯಲ್ಲಿ ಆಸೀನರಾಗಿದ್ದರು.

ಮುಖ್ಯ ಶಿಕ್ಷಕಿ ವಸುಧಾ ಪಿ. ಸ್ವಾಗತಿಸಿ ಶಾಲಾ ದಾಖಲಾತಿ ಬಗ್ಗೆ ಮಾಹಿತಿ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹ ಶಿಕ್ಷಕಿಯರಾದ ಪ್ರಿಯ, ಪ್ರತಿಮಾ, ರಶ್ಮಿ, ಸುನೀತಾ ಇವರು ಕ್ರೀಡಾ ಬಹುಮಾನಗಳ ಪಟ್ಟಿಯನ್ನು ವಾಚಿಸಿದರು.

2024- 25ನೇ ಶೈಕ್ಷಣಿಕ ಸಾಲಿನಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಿದ ಶಾಲಾ ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರಿಗೆ ಸಭೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಇವರು ಕೊಡ ಮಾಡಲ್ಪಟ್ಟ ವಿದ್ಯಾರ್ಥಿಗಳ ಹೆಸರುಳ್ಳ ಜೆರ್ಸಿ ವಿತರಿಸಲಾಯಿತು.

ತದನಂತರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಮೌಲ್ಯಮಾಪನವನ್ನು ಪೋಷಕರು ವೀಕ್ಷಿಸಿದರು.ಜಿಪಿಟಿ ಶಿಕ್ಷಕ ಚೇತನ್ ಇವರು ಧನ್ಯವಾದಗಳು ಸಲ್ಲಿಸಿದರು.

Exit mobile version