

ಧರ್ಮಸ್ಥಳ: ಶ್ರೀ ಗುರುದೇವ ಮಠ, ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಆದಿ ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ, ಶ್ರೀ ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ದೈವದ
ನೇಮೋತ್ಸವ ಎ. 8ರಂದು ಕ್ಷೇತ್ರದ ಪ್ರೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪ್ರಾರ್ಥನೆ, ಪುಣ್ಯಾಹ, ವಾಸ್ತು ಪೂಜೆ, ವಾಸ್ತು ಹೋಮ, ದಿಕ್ಪಾಲ ಬಲಿ ಶ್ರೀ ಸನ್ಯಾಸಿ ಪಂಜುರ್ಲಿ ಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ ವೈದಿಕ ವಿಧ ವಿಧಾನಗಳೊಂದಿಗೆ ನಡೆಯಿತು.