ನ್ಯೂ ವೈಬ್ರೆಂಟ್ ಪ. ಪೂ. ಕಾಲೇಜು ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶ

0

ಮೂಡುಬಿದರೆ: ವೈಬ್ರೆಂಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸಾಧನೆ ಗೈದಿದ್ದಾರೆ. ಉತ್ತಮ ಫಲಿತಾಂಶದ ಮೂಲಕ ರಾಜ್ಯದ ಅತ್ಯುತ್ತಮ ಪಿ.ಯು ಕಾಲೇಜುಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ವಿದ್ಯಾರ್ಥಿ ಅಪೂರ್ವ 587 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಉನ್ನತ ಶ್ರೇಣಿಯಲ್ಲಿ 93 ವಿದ್ಯಾರ್ಥಿಗಳು ಹಾಗೂ ಪ್ರಥಮ ಶ್ರೇಣಿಯಲ್ಲಿ 113 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಗಣೇಶ್ (581), ಅಶ್ವಿತಾ ಬಿ. (579), ವೈಷ್ಣವಿ (578), ಬದ್ರಿನಾಥ ಎಸ್. ಕಿಣಿ (577), ಅಚುತ್ ಮೌರ್ಯ (577), ಅಬ್ದುಲ್ ಜಬ್ಬರ್ (576), ಶ್ರೇಯಸ್ ಹೆಚ್. (575), ಉಜ್ವಲ್ ಬಲ್ಲಾಳ್ (574) ಗೀತಾಂಜಲಿ ಎನ್. (573), ಸರೋಜಾ ಪಾಟೀಲ್ (572) ಆರ್ಯನ್ (571) ಮಹಾಲಕ್ಷ್ಮಿ (570) ಅಂಕ ದೊಂದಿಗೆ ಉತ್ತೀರ್ಣರಾಗಿದ್ದಾರೆ ಈ ವಿದ್ಯಾರ್ಥಿಗಳಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here