ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

0

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಆದೇಶದಂತೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ, ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಆಯೋಜಿಸಲಾಗಿದ್ದ, ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏ. 2ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2.30ರವರೆಗೆ ನಡೆಯಿತು.

ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಶಿಬಿರ ಉದ್ಘಾಟಿಸಿ ಮಾತನಾಡಿದರು. ದೇಹದ ರೋಗನಿರೋಧಕ ಅವ್ಯವಸ್ಥೆಯಿಂದ ಆರೋಗ್ಯಕರ ಅಂಗಾಂಶಗಳ ಮೇಲೆ ಪರಿಣಾಮ ಬೀಳುತ್ತದೆ. ಇದರಿಂದ ಆಟೋಇಮ್ಯೂನ್ ಕಾಯಿಲೆಗಳು ಸಂಭವಿಸುತ್ತವೆ. ರುಮಟಾಯ್ಡ್ ಸಂಧಿವಾತ, ಮಲ್ಟಿಪಲ್ ಸ್ಕೈರೋಸಿಸ್ ಇತ್ಯಾದಿ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಈ ಎಲ್ಲಾ ತೊಂದರೆಗಳಿಗೆ ಈ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್. ಪಿ ಇವರು ಮಾತನಾಡಿ, ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಚಿಕಿತ್ಸೆ ನೀಡುವ ನುರಿತ ತಜ್ಞ ವೈದ್ಯರಾಗಿದ್ದು, ಎಲ್ಲರೂ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡಿ, ಎಲ್ಲಾ ಖಾಯಿಲೆಗಳಿಗೆ ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಹೆಗ್ಗಡೆಯವರ ಬಯಕೆ. ಇವರ ಆದೇಶದಂತೆ ಹಲವಾರು ಉಚಿತ ಶಿಬರಗಳನ್ನು ನಡೆಸಲಾಗುತ್ತಿದೆ. ಹಲವಾರು ಜನರ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆ ಹಚ್ಚಲು ಸಾಧ್ಯವಾಗುವುದರಿಂದ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಕಡಿಮೆಯಾಗುವುದಲ್ಲದೇ ಅತ್ಯಂತ ಶೀಘ್ರವಾಗಿ ಗುಣಮುಖರಾಗುತ್ತಾರೆ ಎಂದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಪಿ. ಶಿಬಿರಕ್ಕೆ ಶುಭ ಹಾರೈಸಿದರು. ಫಿಸಿಷಿಯನ್ ಡಾ| ಯಶಸ್ವಿನಿ, ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ರಜತ್ ಉಪಸ್ಥಿತರಿದ್ದರು. ಇನ್ಶ್ಯೂರೆನ್ಸ್ ವಿಭಾಗದ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು.

ಈ ಶಿಬಿರದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಿದ್ದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದರು.

LEAVE A REPLY

Please enter your comment!
Please enter your name here