

ಕೊಕ್ಕಡ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು ಇವರ ಸಹಯೋಗದಲ್ಲಿ 5ನೇ ತರಗತಿಯಿಂದ 9ನೇ ತರಗತಿಯ ಮಕ್ಕಳ ಬೇಸಿಗೆ ಶಿಬಿರವು ಕೊಕ್ಕಡದ ಶ್ರೀ ರಾಮ ಸೇವಾ ಮಂದಿರದಲ್ಲಿ ಎ. 10ರಂದು ಆರಂಭಗೊಂಡಿದ್ದು ಉಜಿರೆಯ ಗಣೇಶ್ ಪ್ರಸಾದ್ ಮೋಟರ್ ಡ್ರೈವಿಂಗ್ ಸ್ಕೂಲ್ ನ ಮಾಲಕ ರಾಮದಾಸ್ ಭಂಡಾರ್ಕರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿ ಮನೋರಮ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಶ್ರೀರಾಮ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಫಣಿರಾಜ್ ಜೈನ್ ಉಪಸ್ಥಿತರಿದ್ದರು.

ಚಂದ್ರಶೇಖರ ಪುತ್ತೂರು ರವರು ಪ್ರಾಚೀನ ಹಾಗೂ ಸಾಂಸ್ಕೃತಿಯ ಭಾರತ ಭೂಪಟ ಪರಿಚಯ, ರೇಣುಕಾ ಸುಧೀರ್ ರವರು ಕಥಾ ಅವಧಿ, ಪ್ರೊ. ಮಧೂರು ಮೋಹನ ಕಲ್ಲೂರಾಯರು ಗಮಕ ಪರಿಚಯ ಮತ್ತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ವಿದ್ಯಾರ್ಥಿಗಳ ಸರಸ್ವತಿ ವಂದನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಭವ್ಯ ಪಿ. ಡಿ. ಸ್ವಾಗತಿಸಿದರು. ಮೇಘಶ್ರೀ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು. ವಿಂದ್ಯಾ ಪಿ.ಎಸ್ ವಂದಿಸಿದರು. ಶಿಬಿರವು ಏ. 14ರವರೆಗೆ ನಡೆಯಲಿದ್ದು, ಎ.11ರಂದು 2ನೇ ದಿನದ ಶಿಬಿರವನ್ನು ನಿವೃತ್ತ ಶಿಕ್ಷಕ ಕುಂಞಪ್ಪ ಗೌಡ ಉದ್ಘಾಟಿಸಿದರು.
ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಸದಸ್ಯ ಶಾಂತಪ್ಪ ಮಡಿವಾಳ ಉಪಸ್ಥಿತರಿದ್ದರು.