

ಬೆಳ್ತಂಗಡಿ: ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ನಡೆಸಲು ಉzಶಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ ಮತ್ತು ಪ್ರತಿಭಟನೆಯನ್ನು ಮುಂದೂಡಲಾಗಿದೆ.
ಧರ್ಮಸ್ಥಳದ ಮಣ್ಣಸಂಕದಿಂದ ಜಾಥಾ ನಡೆಸಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಸಿ ಸೌಜನ್ಯ ಪ್ರಕರಣದ ತನಿಖೆಗಾಗಿ ಸರಕಾರ ಕೂಡಲೇ ಅಕ್ವಿಟಲ್ ಕಮಿಟಿ ರಚಿಸಬೇಕು ಎಂದು ಆಗ್ರಹಿಸಿ ಹೋರಾಟ ಸಭೆ ನಡೆಸಲು ನಿಗದಿ ಪಡಿಸಲಾಗಿದ್ದ ಕಾರ್ಯಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದೆ. ಉದ್ದೇಶಿತ ಪ್ರತಿಭಟನೆಗೆ ಅವಕಾಶ ನೀಡದಂತೆ ಕೋರಿ ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿ ಧನಕೀರ್ತಿ ಆರಿಗ ಅವರು ಸಲ್ಲಿಸಿರುವ ರಿಟ್ ಅರ್ಜಿಯನ್ನು ಏ.4ರಂದು ವಿಚಾರಣೆಗೆ ಸ್ವೀಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಏಕಸದಸ್ಯ ನ್ಯಾಯಪೀಠ ಆರಂಭದಲ್ಲಿ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು. ಆದರೆ ಉzಶಿತ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದ್ದ ಕೆಲವು ಸಂದೇಶಗಳನ್ನು ಗಮನಿಸಿದ ನ್ಯಾಯಪೀಠ ಉದ್ದೇಶಿತ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಬಹುಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ದೇವಸ್ಥಾನ ಪ್ರವೇಶಿಸುವ ಯತ್ನಗಳ ಬಗ್ಗೆ ವಾಟ್ಸಪ್ ಸಂದೇಶಗಳು ಸೂಚನೆ ನೀಡಿರುವುದರಿಂದ ಈ ಘಟನೆಗಳ ಮೂಲಕ ನ್ಯಾಯಾಲಯದ ಹಿಂದಿನ ಆದೇಶ ಉಲ್ಲಂಘನೆ ಆಗಬಹುದು ಮತ್ತು ಸಾರ್ವಜನಿಕ ಶಾಂತಿಗೆ ತೊಂದರೆ ಉಂಟು ಮಾಡಬಹುದು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಗಮನಿಸಿದ ನ್ಯಾಯಪೀಠ ಅಪರಾಧ ಮನೋಭಾವದ ವ್ಯಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ವಿಚಾರಗಳಿಗೆ ಸಂಬಂಧಿಸಿದ ಪ್ರತಿಭಟನೆಗಳ ಕುರಿತಂತೆ ಇದೇ ಹೈಕೋರ್ಟ್‌ನ ಸಮನ್ವಯ ನ್ಯಾಯಪೀಠ ನೀಡಿರುವ ಆದೇಶವನ್ನು ಉಲ್ಲಂಸುವ ಇರಾದೆ ಹೊಂದಿರುವುದು ಅರ್ಜಿಯ ಜೊತೆಗೆ ಲಗತ್ತಿಸಲಾಗಿರುವ ವಾಟ್ಸ್‌ಆಪ್ ಸಂದೇಶಗಳನ್ನು ಗಮನಿಸಿದರೆ ನಿಸ್ಸಂಶಯವಾಗಿ ವೇದ್ಯವಾಗುವ ಅಂಶ ಎಂದು ಸ್ಪಷ್ಟಪಡಿಸಿದೆ. ಪ್ರತಿವಾದಿ ಕುಸುಮಾವತಿ ಮತ್ತು ನೇಟಿವ್ ಎಂಪವರ್‌ಮೆಂಟ್ ಆಂಡ್ ಎಕ್ವಿಪ್ಪಿಂಗ್ ಟೀಮ್ ಫಾರ್ ಹೋಪ್ ಆಂಡ್ ಇಂಟರ್‍ಯಾಕ್ಷನ್(ನೀತಿ)ಟ್ರಸ್ಟ್‌ನ ಏಜೆಂಟರು, ಅನುಯಾಯಿಗಳು, ಸೇವಕರು ಅಥವಾ ಸಂಬಂಧಿಸಿದ ವ್ಯಕ್ತಿಗಳು, ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನೆಪದಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಧರ್ಮಸ್ಥಳಕ್ಕೆ ನುಗ್ಗುವ ಮತ್ತು ಅಲ್ಲಿನ ಶಾಂತಿ ಕದಡುವ ಉzಶದಲ್ಲಿರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ ರ್‍ಯಾಲಿಗೆ ಮಧ್ಯಂತರ ತಡೆ ನೀಡಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ. ಈ ಪ್ರಕರಣದಲ್ಲಿ ಅರ್ಜಿದಾರ ಧನಕೀರ್ತಿ ಆರಿಗ ಅವರ ಪರವಾಗಿ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಮತ್ತು ವಕೀಲ ರಾಜಶೇಖರ್ ಹಿಳಿಯಾರು ವಾದಿಸಿದ್ದರು.
ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ದೂರು: ಜಾಥಾ ಮತ್ತು ಹಕ್ಕೊತ್ತಾಯ ಮಂಡನಾ ಸಭೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಕಲ್ಲು ತೂರಾಟ ನಡೆಸೋಣ ಮತ್ತು ಕ್ಷೇತ್ರಕ್ಕೆ ಮುತ್ತಿಗೆ ಹಾಕೋಣ ಎಂದು ಸಂಭಾಷಣೆ ಮಾಡಿರುವವರನ್ನು ಪತ್ತೆ ಹಚ್ಚಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅವರು ದೂರು ನೀಡಿದ್ದಾರೆ. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.