

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಏ.10ರಂದು ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವವು ತಹಶೀಲ್ದಾರ್ ಪ್ರಥ್ವಿ ಸಾನಿಕಂ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮಾರಂಭದಲ್ಲಿ ದೀಮತಿ ಮಹಿಳಾ ಸಮಾಜದ ಅಧ್ಯಕ್ಷೆ ಡಾ. ಪಿ ರಜತ ಶೆಟ್ಟಿ ರವರು ಧಾರ್ಮಿಕ ಉಪನ್ಯಾಸ ನೀಡಿದರು ಬೆಳ್ತಂಗಡಿ ತಾಲೂಕು ಪಂಚಾಯಿತ್ ಮಾಜಿ ಅಧ್ಯಕ್ಷ ಎಚ್ ವಿಜಯಕುಮಾರ್, ತಾಲೂಕಿನ ಇಲಾಖೆಯ ಇಲಾಖಾಧಿಕಾರಿಗಳು, ಸಮಾಜ ಬಾಂಧವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಜಯಾನಂದ ತಾಲೂಕು ಪಂಚಾಯತ್ ಬೆಳ್ತಂಗಡಿ ಇವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪರಮೇಶ್ ತಾಲೂಕು ಕಛೇರಿ ಇವರು ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನಿರ್ಹಹಣೆ ಮಾಡಿದರು.