


ಬೆಳ್ತಂಗಡಿ: ಪ್ರಸಕ್ತ ವರ್ಷದಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ 60 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಉಚಿತ ಶಿಕ್ಷಣ( Science and Commerce ವಿಭಾಗಗಳಲ್ಲಿ ) ನೀಡಲು ಬೆಂಗಳೂರು ಬಂಟರ ಸಂಘದವರು “ಸಂಕಲ್ಪ” ಎಂಬ ಹೆಸರಿನ ಯೋಜನೆಯನ್ನು ರೂಪಿಸಿದ್ದಾರೆ. ಈ ಯೋಜನೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಉಚಿತ ಶಿಕ್ಷಣವನ್ನು ಬೆಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆ…ಆರ್ ಎನ್ ಎಸ್ ವಿದ್ಯಾನಿಕೇತನದಲ್ಲಿ ನೀಡಲಾಗುವುದು.( ವಿದ್ಯಾರ್ಥಿಗಳ ಶಾಲಾ ಶುಲ್ಕ, ಸಮವಸ್ತ್ರ,ಹಾಸ್ಟೆಲ್ ವ್ಯವಸ್ಥೆ ಇತ್ಯಾದಿ ಎಲ್ಲವೂ ಉಚಿತ) ವಿದ್ಯಾರ್ಥಿ ಗಳಿಸಿರುವ ಅಂಕಗಿಂತಲೂ ಕುಟುಂಬದ ಆರ್ಥಿಕ ಸ್ಥಿತಿ ಪ್ರಮುಖ ಮಾನದಂಡವಾಗಿರುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನವಾಗಿರುತ್ತದೆ. ಅದೇ ರೀತಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ದಿನಾಂಕ ಏ 27ರ ಭಾನುವಾರದಂದು ಗುರುವಾಯನಕೆರೆ ಬಂಟರ ಭವನದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಅರ್ಜಿ ಫಾರಂ ಬಂಟರ ಸಂಘದ ಕಚೇರಿಯಲ್ಲಿ ಲಭ್ಯವಿದೆ.