ಗುರುವಾಯನಕೆರೆ: ಕುವೆಟ್ಟು ಗ್ರಾಮದ ಸನ್ಯಾಸಿ ಗುಳಿಗ ಕಟ್ಟೆಯ ಸಮೀಪ ಬೈಕ್ ಹಾಗೂ ಟಿಪ್ಪರ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಏ. 14ರಂದು ನಡೆದಿದೆ.
ಗುರುವಾಯನಕೆರೆಯಿಂದ ಗೇರುಕಟ್ಟೆಗೆ ಪ್ರಯಾಣಿಸುತ್ತಿದ್ದ ಸ್ಥಳೀಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಪ್ರಯಾಣಿಸುತ್ತಿದ್ದ ಬೈಕ್ ಸವಾರರಲ್ಲಿ ಓರ್ವ ಉಪೇಂದ್ರ (35) ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆ ಸಾಗಿಸುವ ಮಧ್ಯೆ ಸಾವನಪ್ಪಿದ್ದಾರೆ. ಸಹಸವಾರ ಮೋಹನ್ ರವರಿಗೆ ಕೈ ಭಾಗಕ್ಕೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.