ಕರಂಬಾರು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವಜ್ಞಾನಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯನ್ನು ಶಾಲಾ ಪುಟ್ಟಣಿಗಳು ದೀಪ ಬೆಳಗಿಸುವ ಮೂಲಕ ಆಚರಿಸಲಾಯಿತು.
ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ. ಕೆ. ಈ ಶಾಲೆಯಲ್ಲಿ 7ನೇ ತರಗತಿಯವರೆಗೆ ಕಲಿತು ಮುಂದಿನ ವಿದ್ಯಾಭ್ಯಾಸಕ್ಕೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು ಪೆನ್ನನು ನೀಡಿ ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ರಮೇಶ್ ಛಾವಾಣ್ ಸ್ವಾಗತಿಸಿದರು. ಶಿಕ್ಷಕಿ ಸಾವಿತ್ರಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಜ್ಞಾನ ದೀಪ ಶಿಕ್ಷಕ ಸದಾಶಿವ ಶಾಂತಿನಗರ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿ ಲತಾ, ಸೌಜನ್ಯ ಸಹಕಾರ ನೀಡಿದರು.
ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯ ಅಶ್ವಥ್ ಸಾಲಿಯನ್, ಬಿಸಿ ಊಟ ನೌಕರರು, ಶಾಲಾ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಭಾಗವಹಿಸಿದ್ದರು. ಶಾಲೆಯ ಸಹ ಶಿಕ್ಷಕಿ ತಸ್ಮೀಯ ಧನ್ಯವಾದ ಸಲ್ಲಿಸಿದರು.