ಬೆಳ್ತಂಗಡಿ: ನಡ ಗ್ರಾಮದ ದೇರ್ಲಕ್ಕಿ ಬದ್ರುದ್ದೀನ್ ಅವರು ಮನೆಯು ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿದ್ದು ಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.
ಸ್ಥಳಿಯ ನಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಝಕೀರ್, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ನವೀನ್ ಗೌಡ ಸವಣಾಲು, ಗ್ರಾಮೀಣ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಮದ್ ಬಂಗಾಡಿ, ಗ್ರಾಮೀಣ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುನಿತಾ, ರಝಾಕ್ ನಡ, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಾದ ಅಮೀರ್, ಪ್ರವೀಣ್ ಉಪಸ್ಥಿತರಿದ್ದರು.