Site icon Suddi Belthangady

ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿದ ಕುತ್ಲೂರು ಶಾಲೆಯ ಮಕ್ಕಳು

ಕುತ್ಲೂರು: ಸರಕಾರಿ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಏ.16ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು.

ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಕ್ಯೋಪಾಧ್ಯಾಯಿನಿ ಜ್ಯೋತಿ ಎ. ಎನ್., ಹಳೆ ವಿದ್ಯಾರ್ಥಿ ಸಂಘದ ಶಿವರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿ ನಿಯರು ಉಪಸ್ಥಿತರಿದ್ದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.

Exit mobile version