

ಬೆಳ್ತಂಗಡಿ: 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿರುವ ವಾಣಿಜ್ಯ ವಿಭಾಗದ ಸಿಂಚನಾ, ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿಭಾ ಕೆ. ಆರ್., ಕಲಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಶುಭಾ ಹಾಗೂ ಕಲಾ ವಿಭಾಗದ ಅನನ್ಯ, ಶ್ರವಣ, ವಾಣಿಜ್ಯ ವಿಭಾಗದ ಕಿಶೋರ್, ವಿಜ್ಞಾನ ವಿಭಾಗದ ಗಣ್ಯಶ್ರೀ ಇವರನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.