

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ತೆಕ್ಕಾರು ಗ್ರಾಮದ ಕುಟ್ಟಿಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ರಯನತ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ. ಸಾಹುಲ್ ಹಮೀದ್, ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ತೆಕ್ಕಾರು, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಪುಷ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಶೇಖರ್ ಪೂಜಾರಿ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ನವೀನ್ ಗೌಡ, ಸದಸ್ಯ ಅಬ್ದುಲ್ ರಹಿಮಾನ್, ಶಾಲಾ ಮುಖ್ಯೋಪಾಧ್ಯಾಯ ಅಜರ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.