ಬೆಳ್ತಂಗಡಿ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಜಾತ್ರೋತ್ಸವ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.12ರಿಂದ 13ರವರೆಗೆ ವಾರ್ಷಿಕ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯಿತು.
ಏ.12ರಂದು ಸಂಜೆ ತಂತ್ರಿಗಳ ದೇವಸ್ಥಾನಕ್ಕೆ ಆಗಮನ, ರಂಗಪೂಜೆ, ಭೂತ ಬಲಿ ಹಾಗೂ ದೇವರ ಉತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಏ.13ರಂದು ಗಣಪತಿ ಹೋಮ, ನಿರ್ಮಾಲ್ಯ ಬಲಿ, ದರ್ಶನ ಬಲಿ, ರಾಜಾಂಗಣ ಪ್ರಸಾದ, ಮಧ್ಯಾಹ್ನ ಪ್ರಸಾದ ವಿತರಣೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ಜರಗಿತು.
ಏ.14ರಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ಪ್ರಸಂಗ ಶ್ರೀ ದೇವಿ ಮಹಾತ್ಮೆ ನಡೆಯಿತು. ಅಭಿವೃದ್ಧಿ ಮಂಡಲದ ಅಧ್ಯಕ್ಷ ಹರೀಶ್ ಕುಮಾರ್, ಹಾಗೂ ಅನುವಂಶಿಕ ಆಡಳಿತ ಮೊಕ್ತೇಸರಾದ ಎನ್. ಧನಂಜಯ ಅಜ್ರಿ ನಡಗುತ್ತು ಹಾಗೂ ಊರ-ಪರವೂರ ಭಕ್ತರು ಉಪಸ್ಥಿತರಿದ್ದರು.