ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

0

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಕಛೇರಿಯ ಬಳಿಯ ಮಹಿಳಾ ವೃಂದದ ಸಭಾಂಗಣದಲ್ಲಿ 8 ದಿನಗಳ ಕಾಲ ನಡೆಯುವ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ಎ. 16ರಂದು ನೆರವೇರಿತು.
ಶಿಬಿರವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುಳಾ ಡಿ. ಪ್ರಸಾದ್‌ ಮಾತನಾಡಿ ತಾಲೂಕಿನ ವಿವಿಧ ಮೂಲೆಗಳಿಂದ ಆಗಮಿಸಿದ ಮಕ್ಕಳು ಒಂದೇ ಸೂರಿನಡಿ ಸೇರಿ ಆನಂದಿಸುವ ಈ ಬೇಸಿಗೆ ಶಿಬಿರವು ಮಕ್ಕಳ ಕ್ರಿಯಾಶೀಲ ಚಿಂತನೆಗೆ ಅಡಿಪಾಯವಾಗುವುದರೊಂದಿಗೆ ರಜಾ ಸಮಯವನ್ನು ಉತ್ತಮ ರೀತಿಯಲ್ಲಿ ಕಳೆಯಲು ಅವಕಾಶ ನೀಡುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿ ವಕೀಲ ಭಾರತೀಯ ಮಜಂದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಮಾತನಾಡಿ ಇಲ್ಲಿನ ಚಟುವಟಿಕೆಗಳಿಂದ ಶಿಬಿರಾರ್ಥಿಗಳು ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕು. ವಿನೂತನ ರೀತಿಯ ಝೇಂಕಾರ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ‌

ವೇದಿಕೆಯಲ್ಲಿ ಉಪಸ್ಥಿತರಿದ್ದ ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ಚಂದ್ರರವರು ಝೇಂಕಾರ ಬೇಸಿಗೆ ಶಿಬಿರದ ಅಚ್ಚುಕಟ್ಟುತನವನ್ನು ಶ್ಲಾಘಿಸಿ ಶುಭ ಕೋರಿದರು. ಶಿಬಿರದ ಸಂಯೋಜಕಿ ಹೇಮಾವತಿ ಕೆ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿ ರಾಷ್ಟ್ರಮಟ್ಟದ ಕಲಾವಿದರಾದ ಸದಾಶಿವ ಶಿವಗಿರಿ ಕಲ್ಲಡ್ಕ ಶಿಬಿರದ ಚಟುವಟಿಕೆಗಳನ್ನು ನಡೆಸಿಕೊಟ್ಟರು. ನವ್ಯಾ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ‌ಶಿಕ್ಷಕಿ ಹರಿಣಾಕ್ಷಿ ಕೆ. ನಿರೂಪಿಸಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here