Site icon Suddi Belthangady

ಮೈಸೂರಿನಲ್ಲಿ ನಾವೂರು ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಬೆಳ್ತಂಗಡಿ: ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಏ. 18ರಂದು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಮನ್ಸೂರ್ ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರುನಲ್ಲಿ ತಂಗಿದ್ದರು.

ಏ.18ರಂದು ಬೆಳಿಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು, ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಆಕಸ್ಮಿಕವಾಗಿ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೋಲಿಸರು ತಿಳಿಸಿದ್ದಾರೆ.

ಹಮೀದ್ ಮತ್ತು ಮೈಮುನ ದಂಪತಿಗಳ ಮೂರು ಮಕ್ಕಳಲ್ಲಿ ಓರ್ವ ಈ ಹಿಂದೆ ಮದ್ದಡ್ಕದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದೀಗ ಮನ್ಸೂರ್ ಅಗಲಿಕೆ ಕುಟುಂಬಕ್ಕೆ ಆಘಾತ ಉಂಟಾಗಿದೆ. ಮೃತ ಯುವಕ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Exit mobile version