ಉಜಿರೆಯಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ ಎ.19ರಂದು ಆಯೋಜಿಸಲಾಗಿದ್ದ ರಾಮೋತ್ಸವ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋರಕ್ಷಕ ಪುನೀತ್ ಕೆರೆಹಳ್ಳಿ ಬರುತ್ತದ್ದ ವೇಳೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ಎಸ್. ವಿಜಯ ಪ್ರಸಾದ್ ತಂಡ ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡ ಹಾಕಿ, ದ.ಕ ಪ್ರವೇಶ ನಿಷೇಧ ಮಾಡಿದ ಜಿಲ್ಲಾಧಿಕಾರಿ ಆದೇಶನ ತೋರಿಸಿ ತಡೆದು ವಾಪಸ್ ಹೋಗುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದ ಕಾರಣ ಮಾತಿನ ಚಕಮಕಿಯಿಂದ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಸದ್ಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.