

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.