


ಇಳಂತಿಲ: ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಬನ್ನೆoಗಳ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕದ್ಯಕ್ಷರಾಗಿ, ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯಕ್ಕೆ ಸಂಬಂಧಿಸಿದ ಬನ್ನೆoಗಳ ವಾಲೆಯ ಗುರಿಕಾರರಾಗಿ ಸೇವೆ ಸಲ್ಲಿಸಿದ್ದ ಇಳಂತಿಲ ಗ್ರಾಮದ ಬನ್ನೆoಗಳ ನಿವಾಸಿ ರೊನಾಲ್ಡ್ ಪಿಂಟೋ (58 ವ) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಅವರ ಮೃತದೇಹವು ಎ. 21ರಂದು ಮದ್ಯಾಹ್ನ 1.00 ಗಂಟೆಗೆ ಮೃತರ ಸ್ವಗೃಹ ಬನ್ನೆoಗಳಕ್ಕೆ ಬರಲಿದ್ದು, ಮಧ್ಯಾಹ್ನ 3.00 ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
I