


ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆಗಳ ಐದು
ವರ್ಷಗಳ ಸಾರ್ಥಕ ವಿದ್ಯಾ ಸೇವೆಯ ಸ್ಮರಣಾರ್ಥ ಪಂಚ ಪರ್ವ ಅಂಗವಾಗಿ ಶ್ರೀ ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ ಎ.20ರಂದು ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ನಡೆಯಿತು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ ಮತ್ತು ಉದ್ಘಾಟನೆ ಮಾಡಿದರು. ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯ್ ಚಂದ್ರ ಜೈನ್, ಪ್ರಭಾರ ಪ್ರಾಂಶುಪಾಲ ಡಾ.ಪ್ರಜ್ವಲ್, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿ, ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಧನ್ಯವಾದವಿತ್ತರು.