ಧರ್ಮಸ್ಥಳ: ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾಪಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ, ಜಲ ಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್ ಎ. 20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಕ್ಷೇತ್ರದ ಪೀಠಾಧೀಶ 1008 ಮಹಾ ಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾ ನಂದ ಸರಸ್ವತಿ ಸ್ವಾಮೀಜಿ ಸಚಿವರನ್ನು ಗೌರವಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯ ಅಧ್ಯಕ್ಷ ಸತ್ಯಜೀತ್ ಸುರತ್ಕಲ್, ಕುದ್ರೋಳಿ ಗೋಕರ್ಣನಾಥ್ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ನಿವೃತ್ತ ಎಸ್. ಪಿ. ಪೀತಾಂಬರ ಹೇರಾಜೆ, ಜಿ. ಪ. ಮಾಜಿ ಸದಸ್ಯೆ ನಮಿತಾ ತೋಟತ್ತಾಡಿ, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ, ಪ್ರಮುಖರಾದ ನಿಕೇತ್ ರಾಜ್ ಮೌರ್ಯ, ಅಭಿನಂದನ್ ಹರೀಶ್ ಕುಮಾರ್, ದಯಾನಂದ ಪಿ. ಬೆಳಾಲು, ಯುವ ಬಿಲ್ಲವ ವೇದಿಕೆ ಯ ಅಧ್ಯಕ್ಷ ಎಂ. ಕೆ. ಪ್ರಸಾದ್, ಯುವವಾಹಿನಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ,ತುಕಾರಾಮ್ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ ಮೊದಲದವರು ಉಪಸ್ಥಿತರಿದ್ದರು.